Monday, August 15, 2022

Latest Posts

ಅವಧಿಯೊಳಗೆ ಕಾಮಗಾರಿ ಮುಗಿಸದ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ: ಸಚಿವ ಬಸವರಾಜು ಎಚ್ಚರಿಕೆ

ಮಂಡ್ಯ: ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗಳಿಗೆ ಸರ್ಕಾರದ ಅನುಮೋದನೆ ದೊರೆತು ಹಣ ಬಿಡುಗಡೆಯಾಗಿದ್ದರೂ ಸಹ ಅವಧಿಗೆ ಸರಿಯಾಗಿ ಕೆಲಸ ಮುಗಿಸದ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಡ್ಯ ನಗರ ಸೇರಿದಂತೆ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ಮಳವಳ್ಳಿ, ಮದ್ದೂರು, ನಾಗಮಂಗಲ ಪಟ್ಟಣಗಳಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗಳು ನಡೆಯುತ್ತಿವೆ. ಆದರೆ, ಅವಧಿಗೆ ಸರಿಯಾಗಿ ಗುತ್ತಿಗೆದಾರರು ಮುಗಿಸದ ಕಾರಣ ಜನತೆಗೆ ತೊಂದರೆಯಾಗುತ್ತಿದೆ. ಇದರಿಂದಾಗಿ ಜನತೆ ಜನಪ್ರತಿನಿಧಿಗಳನ್ನು ಪ್ರಶ್ನಿಸುತ್ತಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡಲು ವಿಳಂಬ ಮಾಡಿದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ನಾಲ್ಕು ಬಾರಿ ಭೂಮಿ ಪೂಜೆ
ಕೆ.ಆರ್.ಪೇಟೆಯಲ್ಲಿ ಕುಡಿಯುವ ನೀರು ಮತ್ತು ಯುಜಿಡಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲೇ ಕಾಮಗಾರಿಗೆ ಒಪ್ಪಿಗೆ ಪಡೆದು, 15 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿ, ಸುಮಾರು 4 ಬಾರಿ ಭೂಮಿ ಪೂಜೆ ಮಾಡಿದ್ದೇನೆ. ಆದರೂ ಸಹ ಇನ್ನೂ ಕಾಮಗಾರಿ ಮುಗಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಸಚಿವ ಭೈರತಿ ಬಸವರಾಜು ಅವರ ಗಮನಕ್ಕೆ ತಂದಾಗ, ಶೀಘ್ರ ಕಾಮಗಾರಿ ಮುಗಿಸದಿದ್ದರೆ ಕೆಲಸದಿಂದ ಅಮಾನತು ಮಾಡಬೇಕಾಗುತ್ತದೆ ಎಂದು ಪುರಸಭೆಯ ಸಹಾಯಕ ಇಂಜಿನಿಯರ್ ಮಹದೇವು ಅವರಿಗೆ ಎಚ್ಚರಿಕೆ ನೀಡಿದರು.
ಜಿಲ್ಲೆಯ ಮಂಡ್ಯ ನಗರ ಮತ್ತು ತಾಲ್ಲೂಕುವಾರು ನಡೆಯುತ್ತಿರುವ ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗಳನ್ನು ಶೀಘ್ರ ಮುಗಿಸಿ, ನನಗೆ ವರದಿಯನ್ನು ಕಳುಹಿಸಿಕೊಡಿ. ಮುಂದಿನ ಡಿಸೆಂಬರ್ ವೇಳೆಗೆ ಪುನಃ ಮಂಡ್ಯ ನಗರದಲ್ಲಿ ಸಭೆ ನಡೆಸಲಿದ್ದು, ಅಷ್ಟರೊಳಗೆ ಸಂಬಂಧಿಸಿದ ಕಾಮಗಾರಿಗಳ ಫೆÇೀಟೋವನ್ನು ನನಗೆ ತಲುಪಿಸುವಂತೆ ಜಲಮಂಡಳಿ ಅಧಿಕಾರಿ ಮುಖ್ಯ ಇಂಜಿನಿಯರ್ ಸಿದ್ದನಾಯಕ್ ಅವರಿಗೆ ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss