ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆಗೆ ಚುನಾವಣೆ ದಿನಾಂಕ ಪ್ರಕಟ: ಡಿ. 1 ಮತದಾನ, ಮತಎಣಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಡಿಸೆಂಬರ್ 1ರಂದು ಬೆಳಿಗ್ಗೆ 9ರಿಂದ 4 ಗಂಟೆಯವರಿಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯಿಂದ ಮತಏಣಿಕೆ ನಡೆಯಲಿದೆ.
ಈ ಕುರಿತಂತೆ ಚುನಾವಣಾಧಿಕಾರಿ ಹಾಗೂ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆಗೊಂಡ ಅಶೋಕ್ ಗಸ್ತಿ ಅವರು ದಿನಾಂಕ 17-09-2020ರಂದು ನಿಧನ ಹೊಂದಿರುವುದರಿಂದ ತೆರವಾದ ಸ್ಥಾನವನ್ನು ತುಂಬಲು ಉಪ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇಂದಿನಿಂದಲೇ ರಾಜ್ಯಸಭೆಯ ಒಂದು ಸ್ಥಾನಕ್ಕೆ ಚುನಾವಣಾ ನೀತಿ ಸಂಹಿತೆ ಆರಂಭಗೊಂಡಿದ್ದು, ನ. 18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ನ. 19 ರಂದು ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ನ. 23 ಆಗಿರುತ್ತದೆ. ಡಿಸೆಂಬರ್ 1, 2020ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ಗಂಟೆಯಿಂದ ಮತಏಣಿಕೆ ಆರಂಭಗೊಂಡು, ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss