Wednesday, June 29, 2022

Latest Posts

ಅಸಂಘಟಿತ ಕಾರ್ಮಿಕರಿಗೆ ಜುಲೈ 2021ಕ್ಕೆ ‘ನನ್ನ ಮನೆ ವಸತಿ’ ಯೋಜನೆಯಡಿ ಮನೆ ವಿತರಣೆ : ವಿ.ಸೋಮಣ್ಣ

ಹೊಸ ದಿಗಂತ ವರದಿ, ರಾಮನಗರ:

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ತಾಳಕುಪ್ಪೆ ಗ್ರಾಮವ್ಯಾಪ್ತಿಯಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ನನ್ನ ಮನೆ ಯೋಜನೆಯಡಿ ನಿರ್ಮಿಸಲಾಗುತ್ತಿರುವ ೨೬೪ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಸಿ ಅರ್ಹ ಅಸಂಘಟಿತ ಕಾರ್ಮಿಕರಿಗೆ ಜುಲೈ ೨೦೨೧ ರಲ್ಲಿ ವಿತರಿಸಲಾಗುವುದು ಎಂದು ವಸತಿ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು.
ಅವರು ಇಂದು ಮನೆಗಳ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು. ನಗರ ಪ್ರದೇಶದಲ್ಲಿ  ನಿವೇಶನ ಹಾಗೂ ವಸತಿರಹಿತ ಅಸಂಘಟಿತ ಕಾರ್ಮಿಕ ವಲಯಲದಲ್ಲಿ ದುಡಿಯುತ್ತಿರುವ ಕಾರ್ಮಿಕರು, ಬೀಡಿ ಕಾರ್ಮಿಕರು, ಅಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ತರಕಾರಿ ಮಾರಾಟಗಾರರು ಮುಂತಾದವರಿಗೆ ಶಾಶ್ವತ ನೆಲೆಯನ್ನು ಒದಗಿಸುವ ಉದ್ದೇಶದಿಂದ ಕೈಗೆಟುಕುವ ದರದಲ್ಲಿ ವಸತಿ ಕಲ್ಪಿಸಲು ನನ್ನ ಮನೆ ಎಂಬ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ತಾಳಕುಪ್ಪೆ ಗ್ರಾಮವ್ಯಾಪ್ತಿಯಲ್ಲಿ ನನ್ನ ಮನೆ ಯೋಜನೆಯಡಿ ನಿರ್ಮಿಸಲಾಗುತ್ತಿರುವ ೨೬೪ ಮನೆಗಳ ಕಾಮಗಾರಿ ೨೦೧೦-೧೧ ನೇ ಸಲಿನಲ್ಲಿ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದು, ಪ್ರಸ್ತುತ್ತ ಈ ಯೋಜನೆಗೆ ಪುನರುಜ್ಜೀವನಗೊಳಿಸಲು ಕ್ರಮವಹಿಸಲಾಗಿದೆ. ಇದರೊಂದಿಗೆ  ಹೊಸದಾಗಿ ೪೯೨ ಮನೆ ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಮನೆಗಳಿಗೆ ೧೧ ಲಕ್ಷ ರೂ ನಿಗಧಿಪಡಿಸಲಾಗಿದ್ದು, ಇಲ್ಲಿ ಮೂಲಭೂತ ಸೌಕರ್ಯಗಳಾದ ವಿದ್ಯುತ್, ರಸ್ತೆ, ಡಾಂಬರು ಚರಂಡಿ ವ್ಯವಸ್ಥೆ, ಬೋರ್ ವೆಲ್ ನೀರಿನ ಸರಬರಾಜು ಒಳಚರಂಡಿ, ಸಿವೇಜ್ ಟ್ರೀಟ್‌ಮೆಂಟ್ ಪ್ಲಾಂಟ್, ವಿದ್ಯುತ್ ಸೇವೆಗಳ ಚಾರ್ಜಿಂಗ್ ಜಿ.ಎಲ್.ಎಸ್.ಆರ್ ಮತ್ತು ಪೈಪ್ ಮತ್ತು ವಾಲ್ ಕನೆಕ್ಷನ್‌ಗಳ ಸೇವೆಯನ್ನು ಒದಗಿಸುವ ಮೂಲಕ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಈ ಸ್ಥಳದಲ್ಲಿ ವಾಸಿಸುವರಿಗೆ ಅನುಕೂಲವಾಗುವಂತೆ ಒಂದು ಅಂಗನವಾಡಿ, ಹಾಪ್‌ಕಾಮ್ಸ್, ಆರೋಗ್ಯ ಕೇಂದ್ರ ಹಾಗೂ ನ್ಯಾಯಬೆಲೆ ಅಂಗಡಿಯನ್ನು ಸಹ ತೆರೆಯಲು ಬೇಕಿರುವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರಾಜ್ಯದ ನಗರ ಪ್ರದೇಶದಲ್ಲಿ ೧೭೮೫ ಕೊಳಚೆ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಕೊಳಚೆ ಪ್ರದೇಶಗಳು ೭೦೦೦ ಎಕರೆ ಒಳಗೊಂಡಿರುತ್ತದೆ. ಸದರಿ ಭಾಗದಲ್ಲಿ ವಾಸಿಸುತ್ತಿರುವ ಅರ್ಹರನ್ನು ಗುರುತಿಸಿ ಅದೇ ಸ್ಥಳದಲ್ಲಿ ನಿವೇಶನ ನೀಡಲು ಯೋಜಿಸಲಾಗುತ್ತಿದೆ ಎಂದರು.
ರಾಮನಗರ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ೪೬೦೦ ಮನೆಗಳ ನಿರ್ಮಾಣ ನಡೆಯುತ್ತಿದ್ದು, ಇದಕ್ಕೆ ಬೇಕಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಹಾಗೂ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಮನೆಗಳನ್ನು ವಿತರಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್-೧೯ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ/ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಲು ಶ್ರವ್ಯ ಮತ್ತು ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್.ಇ.ಡಿ ಪರದೆ ಹೊಂದಿರುವ ಮೊಬೈಲ್ ವಾಹನದಲ್ಲಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಸತಿ ಸಚಿವರಾದ ವಿ.ಸೋಮಣ್ಣ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್, ಶಾಸಕರಾದ ಎ. ಮಂಜುನಾಥ್, ರಾಜೀವ್ ಗಾಂದಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss