spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಸ್ತಿತ್ವಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಾಂಗ್ರೆಸ್ ನಲ್ಲಿ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

- Advertisement -Nitte

ಹೊಸ ದಿಗಂತ ವರದಿ, ದಾವಣಗೆರೆ:

ಕಾಂಗ್ರೆಸ್ಸಿನಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ಉಳಿಯಲು ಏನಾದರೂ ಮಾತನಾಡಬೇಕೆಂಬ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ವಿರುದ್ಧ ಕಾಂಗ್ರೆಸ್ಸಿನಲ್ಲಿ ಉಳಿಯಬೇಕಾದರೆ ಏನಾದರೂ ಮಾತನಾಡಬೇಕಾದ ಅನಿವಾರ್ಯತೆಗೆ ಸಿದ್ದರಾಮಯ್ಯ ಸಿಲುಕಿದ್ದಾರೆ. ಈಗಲೂ ತಾವು ಮುಖ್ಯಮಂತ್ರಿಯಾಗಬೇಕೆಂಬ ಮಾತನ್ನೇ ಪುನರುಚ್ಛಾರ ಮಾಡುತ್ತಿರುತ್ತಾರೆ. ಸಿದ್ದರಾಮಯ್ಯಗೆ ಆರೆಸ್ಸೆಸ್, ಬಿಜೆಪಿ, ಗೋಹತ್ಯೆ ನಿಷೇಧ ಕಾಯ್ದೆ ಹೀಗೆ ಯಾವುದರ ಮೇಲೂ ಕೋಪ ಇಲ್ಲ. ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಮೇಲಿನ ಕೋಪಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರಷ್ಟೇ. ಬಾದಾಮಿಯಲ್ಲೇ 18 ಗ್ರಾಪಂಗಳನ್ನು ಬಿಜೆಪಿ ಗೆದ್ದಿದೆ. ಅದೇ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷ ಗೆದ್ದಿರುವುದು ಕೇವಲ 8 ಗ್ರಾಪಂಗಳನ್ನು ಮಾತ್ರ. ಕಾಂಗ್ರೆಸ್ಸಿನಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಮಾಜಿ ಸಿಎಂ ಈಗ ಹೋರಾಟ ನಡೆಸಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ರಾಜ್ಯದ ಗ್ರಾಪಂ ಚುನಾವಣೆಯಲ್ಲಿ 45 ಸಾವಿರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು, ಕಾರ್ಯಕರ್ತರು ಗೆದ್ದಿದ್ದು, ಒಟ್ಟು 3500 ಗ್ರಾಪಂಗಳಲ್ಲಿ ಅಧ್ಯಕ್ಷರಾಗುವ ಅವಕಾಶ ಹೊಂದಿರುವ ನಮ್ಮ ಪಕ್ಷ ಬೇರಾವುದೇ ಪಕ್ಷದ ಕಾಲು ಹಿಡಿಯುವ ಅವಶ್ಯಕತೆ ಇಲ್ಲ. ಎಲ್ಲೂ ಯಾವುದೇ ಪಕ್ಷದ ಜೊತೆಗೆ ಹೊಂದಾಣಿಕೆ, ಒಪ್ಪಂದದ ಪ್ರಶ್ನೆಯೇ ಬಿಜೆಪಿಗೆ ಉದ್ಭವಿಸದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕನಿಷ್ಟ 150 ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯ ಬಿಜೆಪಿಗೆ ಇದೆ ಎಂದು ಅವರು ಜೆಡಿಎಸ್ನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದರು.
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಧಿಕಾರ. ಯಾರಿಗೂ ಸಚಿವರಾಗಬೇಕೆಂಬ ಅವಸರವೂ ಇಲ್ಲ. ಹಿಂದಿನ ಮುಖ್ಯಮಂತ್ರಿ ಬಳಿ 13 ಖಾತೆಗಳಿದ್ದವು. ಸಿಎಂ ಯಡಿಯೂರಪ್ಪ ಬಳಿ 7 ಖಾತೆಗಳಿದ್ದು, ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಎಲ್ಲಾ ಸಚಿವರೂ ತಮ್ಮ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ಜನರಿಗೆ ಉತ್ತಮ ಆಡಳಿತವನ್ನು ಬಿಜೆಪಿ ಸರ್ಕಾರ ನೀಡುತ್ತಿದೆ ಎಂದು ಅವರು ತಿಳಿಸಿದರು.
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳ ಕುರಿತಂತೆ ಏನೆಲ್ಲಾ ಮಾತುಕತೆ ನಡೆದಿದೆಯೆಂಬ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ಈಗಾಗಲೇ ವರದಿ ಕಳಿಸಲಾಗಿದೆ. ಕೆಲ ವಿಚಾರಗಳನ್ನು ಎಲ್ಲಿ, ಹೇಗೆ ಮಾತನಾಡಬೇಕೆಂಬುದು ತಿಳಿದಿರಬೇಕು ಎಂದು ಪ್ರಶ್ನೆಯೊಂದಕ್ಕೆ ನಳಿನಕುಮಾರ ಕಟೀಲು ಪ್ರತಿಕ್ರಿಯಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss