ಹೊಸ ದಿಗಂತ ವರದಿ, ಶಿವಮೊಗ್ಗ:
ನಗರದಲ್ಲಿ ಗುರುವಾರ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ದೊಡ್ಡಪೇಟೆ, ತುಂಗಾನಗರ ಮತ್ತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್ ತಿಳಿಸಿದ್ದಾರೆ.