Monday, August 15, 2022

Latest Posts

ಅ.21ರಂದು ಉತ್ತರ ಕರ್ನಾಟಕದ ಅತಿವೃಷ್ಟಿ ಸಮೀಕ್ಷೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು 21ರಂದು ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು 21ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆದ್ಯತೆ ನೀಡಲಾಗುತ್ತಿದೆ. ಸೋಮವಾರ ಶಿಕಾರಿಪುರದಲ್ಲಿ ಚಾಲನೆ ನೀಡಲಾಗಿರುವ ಕಲ್ಲುವಡ್ಡು ಏತನೀರಾವರಿ ಯೋಜನೆಯಿಂದಾಗಿ ಶಿಕಾರಿಪುರ ಹಾಗೂ ಸೋರಬ ತಾಲೂಕುಗಳ 3,730 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸಾಧ್ಯವಾಗಲಿದೆ. ಯೋಜನೆಯಿಂದ 41 ಕೆರೆಗಳಿಗೆ ಸಹ ನೀರು ತುಂಬಿಸಲಾಗುತ್ತಿದೆ. ತಾಳಗುಂದ ಹೊಸೂರು ಏತ ನೀರಾವರಿ ಯೋಜನೆ ಈಗಾಗಲೇ ಅನುಷ್ಟಾನಗೊಳ್ಳುತ್ತಿದ್ದು, ಇದರಿಂದ 230 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಲಿದೆ. ಮುಂದಿನ ವರ್ಷ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಇನ್ನಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss