Tuesday, November 4, 2025

ಆಂಧ್ರದ ಕಾಕಿನಾಡಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತ: ರಾತ್ರಿ ಕರ್ಫ್ಯೂ ಜಾರಿ, ಕರಾವಳಿ ಪ್ರದೇಶದಲ್ಲಿ ಹೈ ಅಲರ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಕಾಕಿನಾಡು ಕರಾವಳಿಗೆ ಮೊಂಥಾ ಚಂಡಮಾರುತ ಮಂಗಳವಾರ ಸಂಜೆ ಅಪ್ಪಳಿಸಿದ್ದು, ಮುಂದಿನ ಮೂರರಿಂದ ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ದೃಢಪಡಿಸಿದೆ.

ಇಂದು ರಾತ್ರಿ ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಜನರನ್ನು ರಕ್ಷಿಸಲು ಮತ್ತು ಹಾನಿಯನ್ನು ಕಡಿಮೆ ಮಾಡಲು ಆಂಧ್ರ ಸರ್ಕಾರವು ರಾತ್ರಿ ಕರ್ಫ್ಯೂ ವಿಧಿಸಿದೆ. 7 ಕರಾವಳಿ ಜಿಲ್ಲೆಗಳಲ್ಲಿ ವಾಹನ ಸಂಚಾರದ ಮೇಲೆ ಸಂಪೂರ್ಣ ನಿಷೇಧ ಸೇರಿದಂತೆ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದೆ.

ಮುಂದಿನ ಮೂರರಿಂದ ನಾಲ್ಕು ಗಂಟೆಗಳ ಕಾಲ ಮುಂದುವರಿಯುತ್ತದೆ ಎಂದು ದೃಢಪಡಿಸಿದೆ. ಹೀಗಾಗಿ, ಅಪಘಾತಗಳನ್ನು ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಂಧ್ರಪ್ರದೇಶ ಸರ್ಕಾರವು 7 ಕರಾವಳಿ ಜಿಲ್ಲೆಗಳಾದ ಕೃಷ್ಣ, ಎಲೂರು, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಕಾಕಿನಾಡ, ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಮತ್ತು ಅಲ್ಲೂರಿ ಸೀತಾರಾಮ ರಾಜುಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ವಾಹನ ಸಂಚಾರವನ್ನು ನಿಷೇಧಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಛತ್ತೀಸ್‌ಗಢ ಮತ್ತು ಪುದುಚೇರಿಯಾದ್ಯಂತ 25 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ.

ಈ ಚಂಡಮಾರುತವು ಮಚಲಿಪಟ್ನಂನಿಂದ ಪೂರ್ವಕ್ಕೆ 110 ಕಿ.ಮೀ, ಕಾಕಿನಾಡದಿಂದ ದಕ್ಷಿಣಕ್ಕೆ 100 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣ-ನೈಋತ್ಯಕ್ಕೆ 220 ಕಿ.ಮೀ ಮತ್ತು ಒಡಿಶಾದ ಗೋಪಾಲಪುರದಿಂದ ನೈಋತ್ಯಕ್ಕೆ 460 ಕಿ.ಮೀ ದೂರದಲ್ಲಿದೆ.

ಈ ಚಂಡಮಾರುತವು ಅದೇ ದಿಕ್ಕಿನಲ್ಲಿ ಚಲಿಸುತ್ತಲೇ ಇರುತ್ತದೆ ಮತ್ತು ಆಂಧ್ರಪ್ರದೇಶದ ಮಚಲಿಪಟ್ಟಣ ಹಾಗೂ ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಲೂ ತೀವ್ರ ಚಂಡಮಾರುತವಾಗಿ ಹಾದುಹೋಗುತ್ತದೆ ಎಂದು ಐಎಂಡಿ ತಿಳಿಸಿದೆ. ಗಂಟೆಗೆ 90–110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ.

error: Content is protected !!