Wednesday, August 17, 2022

Latest Posts

ಆಂಧ್ರಪ್ರದೇಶಕ್ಕೆಇನ್ಮುಂದೆ ಮೂರು ರಾಜಧಾನಿ: ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರಿಂದ ಅಂಕಿತ

ಅಮರಾವತಿ: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಹೊಂದುವ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸರ್ಕಾರದ ಪ್ರಸ್ತಾವನೆಗೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್ ಅಂಕಿತ ಹಾಕಿದ್ದಾರೆ.
ಇನ್ನುಮುಂದೆ ವಿಶಾಖಪಟ್ಟಣಂನಲ್ಲಿ ಕಾರ್ಯನಿರ್ವಾಹಕ ರಾಜಧಾನಿ, ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿ ಮತ್ತು ಕರ್ನೂಲ್ನಲ್ಲಿ ನ್ಯಾಯಾಂಗ ರಾಜಧಾನಿಯಾಗಲಿದೆ.
ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ಕುರಿತು ಸಿಎಂ ಜಗನ್ ಸರ್ಕಾರ ಮೂರು ವಾರಗಳ ಹಿಂದಷ್ಟೇ ಆಂಧ್ರ ಪ್ರದೇಶ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ “ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ” ಕುರಿತಾದ ಮಸೂದೆ ಮಂಡಿಸಿ ವಿಧಾನಸಭೆಯ ಅನುಮೋದನೆ ಪಡೆದಿತ್ತು. ವಿಧಾನಸಭೆಯಲ್ಲಿ ಆಂಧ್ರಪ್ರದೇಶ ಹಣಕಾಸು ಸಚಿವ ಬುಗ್ಗನ್​​ ರಾಜೇಂದ್ರನಾಥ್​​ ರೆಡ್ಡಿ, ರಾಜ್ಯಾಡಳಿತ ವಿಕೇಂದ್ರಿಕರಣ ಮಸೂದೆ ಮಂಡಿಸಿದ್ದರು. ಜತೆಗೆ ಆಂಧ್ರದ ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆಯನ್ನು ಮಂಡನೆ ಮಾಡಿದ್ದರು.
ಆಂಧ್ರ ಪ್ರದೇಶ ವಿಧಾನ ಪರಿಷತ್ ನಲ್ಲೂ ಮಂಡನೆ ವೇಳೆ ಟಿಟಿಪಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ ಮಸೂದೆ ಮಂಡನೆಗೆ ರಾಜ್ಯಪಾಲರು ನೀಡಿದ್ದ ಗಡುವು ಮುಕ್ತಾಯವಾದ ಹಿನ್ನಲೆಯಲ್ಲಿ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ಕೊಡಲಾಗಿತ್ತು.
 

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!