Thursday, August 11, 2022

Latest Posts

ಆಗಸ್ಟ್ ನಂತರವಷ್ಟೇ ಶಾಲೆ ತೆರೆಯುವ ಬಗ್ಗೆ ಇನ್ನೊಂದು ಸುತ್ತಿನ ಚರ್ಚೆ ಮಾಡಲಾಗುವುದು: ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನಾ ಆತಂಕದ ನಡುವೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಇದರ ಜೊತೆಗೆ ಪೋಷಕರು ಹಾಗೂ ವಿದ್ಯಾರ್ಥಿಗಳ ಮೂಡುತ್ತಿರುವ ಪ್ರಶ್ನೆಯೆಂದರೆ ಶಾಲಾ ಕಾಲೇಜುಗಳು ತೆರೆಯೋದು ಯಾವಾಗ ಎಂಬುದು.
ಈ ಕುರಿತು ತುಮಕೂರಿನಲ್ಲಿ ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಆಗಸ್ಟ್ ತಿಂಗಳ ನಂತರವಷ್ಟೇ ಶಾಲೆ ತೆರೆಯುವ ಬಗ್ಗೆ ಇನ್ನೊಂದು ಸುತ್ತಿನ ಚರ್ಚೆ ಆರಂಭಿಸುವುದಾಗಿ ಹೇಳಿದರು. ಮೊದಲು ಕಾಲೇಜು ಹಾಗೂ ಪ್ರೌಢಶಾಲೆಗಳನ್ನು ತೆರೆಯಲಾಗುವುದು ನಂತರ ಪ್ರಾಥಮಿಕ ಶಾಲೆಗಳನ್ನು ಪುನಾರಂಭ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬಂದಾಗ ಕಾಲೇಜುಗಳನ್ನು ತೆರೆಯಲಾಗುವುದು, ಬಳಿಕ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಪುನಾರಂಭದ ಕುರಿತು ಚಿಂತನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss