spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಆಗಸ್ಟ್ 24 ರಂದು ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ಮೈಸೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಆಗಸ್ಟ್ 24 ರಂದು ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಸುತ್ತಲೂ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಘೋಷಿಸಿರುತ್ತಾರೆ.
ನಗರದಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಲಂ 144 ಸಿ.ಆರ್.ಪಿ.ಸಿ ರೀತ್ಯ ನಿಷೇಧಾಜ್ಞೆ ಹೇರಲಾಗಿದೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಯ ವಸ್ತುಗಳನ್ನು ಒಯ್ಯಬಾರದು ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap