ಯಾದಗಿರಿ : ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ಲಾಕ್ಡೌನ್ ತೆರವು-3ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದರು. ಅನ್ಲಾಕ್-3 ಆಗಸ್ಟ್ 1ರಿಂದ ಜಾರಿಗೊಂಡು ಆಗಸ್ಟ್ 31ರವರೆಗೆ ಚಾಲ್ತಿಯಲ್ಲಿರುವುದಾಗಿ ತಿಳಿಸಿದರು.
ಕಂಟೈನ್ಮೆoಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಈ ಕೆಳಗಿನವುಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ಅನುಮತಿಸಲಾಗುವುದು. ಶಾಲೆ- ಕಾಲೇಜು, ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳು ಆಗಸ್ಟ್ 31, 2020ರವರೆಗೆ ಮುಚ್ಚಲ್ಪಡುತ್ತವೆ. ಆನ್ಲೈನ್/ ದೂರ ಶಿಕ್ಷಣ ಕಲಿಕೆಗಳಿಗೆ ಅನುಮತಿಸುವುದನ್ನು ಮುಂದುವರಿಸಲಾಗುವುದು ಮತ್ತು ಪ್ರೋತ್ಸಾಹಿಸಲಾಗುವುದು. ಸಿನಿಮಾ ಮಂದಿರ, ಈಜುಕೊಳ, ಮನೋರಂಜನಾ ಉದ್ಯಾನವನ, ಚಿತ್ರಮಂದಿರ, ಬಾರ್ ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್ ಮತ್ತು ಅಂತಹುದೇ ಸ್ಥಳಗಳು ತೆರೆಯುವಂತಿಲ್ಲ ಎಂದು ಹೇಳಿದರು.
ಯೋಗ ಕೇಂದ್ರಗಳನ್ನು ಮತ್ತು ಜಿಮ್ನಾಷಿಯಂಗಳನ್ನು ತೆರೆಯಲು ದಿನಾಂಕ:05-08-2020ರಿoದ ಅನುಮತಿಸಲಾಗುವುದು. ಈ ಸಂಬoಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಮತ್ತು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ವಿಧಾನ (ಎಸ್ಓಪಿ)ಯನ್ನು ಹೊರಡಿಸಲಾಗುವುದು. ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಸಂತೆ, ಜಾತ್ರೆಗಳು ಇತರೆ ಬೃಹತ್ ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ ಎಂದರು.
ಈ ಮೇಲಿನ ಕಾರ್ಯಚಟುವಟಿಕೆಗಳನ್ನು ಪುನರರಾಂಭಿಸುವುದಕ್ಕೆ ಭಾರತ ಸರ್ಕಾರವು ಪ್ರತ್ಯೇಕವಾಗಿ ದಿನಾಂಕವನ್ನು ನಿರ್ಣಯಿಸಬಹುದು ಮತ್ತು ಭಾರತ ಸರ್ಕಾರದ ಸಂಬAಧಪಟ್ಟ ಮಂತ್ರಾಲಯಗಳಿAದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಅಗತ್ಯ ಪ್ರಮಾಣಿತ ಕಾರ್ಯ ವಿಧಾನ (ಎಸ್ಓಪಿ)ಯನ್ನು ಹೊರಡಿಸಬಹುದು ಎಂದು ತಿಳಿಸಿದರು.
ಶಿಷ್ಟಾಚಾರದಂತೆ ಸ್ವಾತಂತ್ರö್ಯ ದಿನಾಚರಣೆ: ಬರುವ ಆಗಸ್ಟ್ 15ರಂದು ಸ್ವಾತಂತ್ರö್ಯ ದಿನಾಚರಣೆಯನ್ನು ಭಾರತ ಸರ್ಕಾರದ ಗೃಹ ಮಂತ್ರಾಲಯವು ಹೊರಡಿಸಿರುವ ಸೂಚನೆಗಳನ್ವಯ ಆಚರಿಸಲಾಗುವುದು. ಇದಕ್ಕಾಗಿ ಪೂರ್ವಭಾವಿ ಸಭೆಯಲ್ಲಿ ಚರ್ಚೆ ನಡೆಸಿ, ಶಿಷ್ಟಾಚಾರದಂತೆ ಸ್ವಾತಂತ್ರö್ಯ ದಿನಾಚರಣೆಗೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಕೋವಿಡ್-19 ನಿರ್ವಹಣೆಯ ಸಂಬAಧ ಜಿಲ್ಲೆಯಲ್ಲಿ ರಾಷ್ಟಿçಯ ನಿರ್ದೇಶನಗಳು ಜಾರಿಯಲ್ಲಿರಲಿವೆ. ಕಂಟೈನ್ಮೆAಟ್ ವಲಯಗಳಲ್ಲಿನ ಲಾಕ್ಡೌನ್ ಆಗಸ್ಟ್ 31ರವರೆಗೆ ಮುಂದುವರೆಯಲಿವೆ ಎಂದು ಮಾಹಿತಿ ನೀಡಿದರು..
ಪ್ರವಾಹ ಎದುರಿಸಲು ಸಿದ್ಧತೆ: ಜಿಲ್ಲೆಯಲ್ಲಿ ಕಾಲಕಾಲಕ್ಕೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ದಿನಾಂಕ:25-07-2020 ರಂದು ಪ್ರವಾಹದ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಈಗಾಗಲೇ ತೆಗೆದುಕೊಂಡ ಕ್ರಮಗಳ ಕುರಿತು ಸಭೆ ನಡೆಸಲಾಗಿದೆ ಎಂದರು.
ಬೆಳೆಹಾನಿ ಸಮೀಕ್ಷೆ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ವಾಡಿಕೆ ಮಳೆ 217 ಮಿ.ಮಿ. ಇದ್ದು ಜುಲೈ 30ರವರೆಗೆ 368 ಮಿ.ಮೀ. ಮಳೆಯಾಗಿರುತ್ತದೆ. ಶೇ.70ರಷ್ಟು ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುತ್ತದೆ. ಜಿಲ್ಲೆಯಲ್ಲಿ ಜೂನ್, ಜುಲೈ ಮಾಹೆಯಲ್ಲಿ ಬಿದ್ದ ಅಕಾಲಿಕ ಮಳೆಯಿಂದ ಮುಂಗಾರು ಹಂಗಾಮಿನ ಬೆಳಗಳಾದ ಹತ್ತಿ, ತೊಗರಿ, ಹೆಸರು, ಸಜ್ಜೆ, ಭತ್ತ, ಮತ್ತು ಶೇಂಗಾ ಬೆಳೆಗಳು ಅಂದಾಜು ಸುಮಾರು 2885.02 ಹೆಕ್ಟರ್ಗಳಷ್ಟು ಹಾನಿಯಾಗಿದ್ದು, ಈ ಕುರಿತು ಜಂಟಿ ಸಮೀಕ್ಷೆ ಕಾರ್ಯ ಪ್ರಗತಿಯಲಿದೆ. ಅಂತಿಮ ವರದಿಯನ್ನು ಕಂದಾಯ ಮತ್ತು ಕೃಷಿ ಇಲಾಖೆ ಜಂಟಿ ಸಮೀಕ್ಷೆ ಪೂರ್ಣಗೊಂಡ ನಂತರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಅಶ್ವಿಜಾ ಬಿ.ವಿ., ಪ್ರಭಾರಿ ಅಪರ ಜಿಲ್ಲಾಧಿಕಾರಿಗಳಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್ ಅವರು ಉಪಸ್ಥಿತರಿದ್ದರು.