Monday, July 4, 2022

Latest Posts

ಆಗ್ನೇಯ ಪದವೀಧರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಜಿ.ಹೆಚ್.ತಿಪ್ಪಾರೆಡ್ಡಿ ವಿಶ್ವಾಸ

ಚಿತ್ರದುರ್ಗ: ಈ ಬಾರಿಯ ಆಗ್ನೇಯ ಪದವೀಧರ ಕ್ಷೇತ್ರದ ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿಗೆ ಅತಿಹೆಚ್ಚು ಮತದಾನವಾಗಲಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವು ಪಡೆಯಲಿದ್ದಾರೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಸಂದರ್ಭದಲ್ಲಿ ಪತ್ರಿಕೆ ಜೊತೆ ಮಾತನಾಡಿದ ಅವರು, ಕಳೆದ ೩೦ – ೪೦ ವರ್ಷದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಇತಿಹಾಸದಲ್ಲಿ ಅತಿಹೆಚ್ಚು ನೊಂದಣಿ, ಅತಿಹೆಚ್ಚು ಅಭ್ಯರ್ಥಿಗಳು ನಿಂತಿರುವುದು ಇದೇ ಮೊದಲು. ಮೊದಲು ಸುತ್ತಿನಲ್ಲಿ ಯಾರು ಗೆಲ್ಲುತ್ತಾರೆ ಎಂದು ಹೇಳಲಾಗದು. ಎಲ್ಲರೂ ಕುತೂಹಲದಿಂದ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಮತಗಳು ವಿಭಜನೆಯಾಗಿ ಮೊದಲ ಸುತ್ತಿನಲ್ಲಿ ಯಾರು ಸ್ಪಷ್ಟ ಬಹುಮತ ಪಡೆಯುತ್ತಾರೆ ಎಂದು ಹೇಳುವುದು ಕಷ್ಟಸಾಧ್ಯ. ಮೊದಲ ಸುತ್ತಿನಲ್ಲಿ ಗೆಲ್ಲದಿದ್ದರೂ ನಂತರದ ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಲಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಅತಿಹೆಚ್ಚು ಮತ ಗಳಿಸುವ ವಿಶ್ವಾಸವಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಾವಣಗೆರೆ ಜಿಲ್ಲೆಗಳಲ್ಲಿ ಯಾವ ರೀತಿ ಮತದಾನವಾಗಿದೆಯೋ ಎಂಬುದನ್ನು ಹೇಳಲು ಆಗುವುದಿಲ್ಲ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರಿಗೆ ಅತಿಹೆಚ್ಚು ಮತಗಳು ದೊರೆಯುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss