ಹೊಸದಿಗಂತ ಆನ್ಲೈನ್ ಡೆಸ್ಕ್:
ಮನೆಯ ಮಹಡಿ ಮೇಲೆ ಆಟವಾಡುತ್ತಾ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯ ಕುಣಿಗಲ್ ರಸ್ತೆಯ ಮಧುಬಿಂದು( 15 ) ಮೃತರು.
ಮನೆಯ ಮಹಡಿ ಮೇಲೆ ಮಧು ಆಟವಾಡುತ್ತಿದ್ದು, ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಮನೆಯ ಕಾಂಪೌಂಡ್ನ ಕಬ್ಬಿಣದ ಸರಳು ಹೊಟ್ಟೆ ಹಾಗೂ ಎದೆ ಭಾಗಕ್ಕೆ ಹೊಕ್ಕಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.