Wednesday, August 17, 2022

Latest Posts

ಆದಿಚುಂಚನಗಿರಿ ಕೆ.ಆರ್. ನಗರ ಶಾಖಾ ಮಠದ ಶ್ರೀ ಶಿವಾನಂದನಾಥ ಸ್ವಾಮೀಜಿ ವಿಧಿವಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆದಿಚುಂಚನಗಿರಿ ಮಹಾಸಂಸ್ಥಾನದ ಕೆ.ಆರ್. ನಗರ ಶಾಖಾ ಮಠದ ಶ್ರೀ ಶಿವಾನಂದನಾಥ ಸ್ವಾಮೀಜಿ (63) ಅವರು ವಿಧಿವಶರಾಗಿದ್ದಾರೆ.
ಮೈಸೂರಿನ ಚುಂಚನಕಟ್ಟೆಯಲ್ಲಿರುವ ಮಠದಲ್ಲಿದ್ದ ಶಿವಾನಂದ ಸ್ವಾಮೀಜಿ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಅವರನ್ನು ಮಂಡ್ಯ  ಜಿಲ್ಲೆಯ ಬೆಳ್ಳೂರು ಕ್ರಾಸ್ ಬಳಿಯಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸ್ವಾಮೀಜಿ ಅವರ ನಿಧನಕ್ಕೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!