ಆನ್‍ಲೈನ್ ಟಿಕೆಟ್ ಹೊಂದಿದವರಿಗೆ ಮಾತ್ರ ಬೆಂಗಳೂರಿನಿಂದ-ಮೈಸೂರಿಗೆ ರೈಲಿನಲ್ಲಿ ಪ್ರಯಾಣಕ್ಕೆ ಅವಕಾಶ

0
53

ಮಂಡ್ಯ: ಬೆಂಗಳೂರಿನಿಂದ-ಮೈಸೂರಿಗೆ ಶುಕ್ರವಾರ (ಮೇ. 22) ದಿಂದ ಎರಡು ರೈಲುಗಳು ಸಂಚರಿಸಲಿದ್ದು, ಆನ್‍ಲೈನ್‍ನಲ್ಲಿ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನಿಂದ ಬೆಳಗ್ಗೆ 9.30ಕ್ಕೆ ಹೊರಡುವ ರೈಲು ರಾಮನಗರ, ಮದ್ದೂರು, ಮಂಡ್ಯ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿಗಳಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿರುವವರು ಮಾತ್ರ ಪ್ರಯಾಣ ಮಾಡಬಹುದಾಗಿದೆ.
ರೈಲು ನಿಲ್ದಾಣಗಳಲ್ಲಿರುವ ಟಿಕೆಟ್ ಕೌಂಟರ್‍ಗಳಲ್ಲಿ ಯಾವುದೇ ಟಿಕೆಟ್‍ಗಳನ್ನೂ ನೀಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ನಿಲ್ದಾಣದ ಹೊರ ಭಾಗದಲ್ಲಿ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಜರ್ ವಿತರಿಸುವರು. ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ದಾಣ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಅದೇ ರೀತಿ ರೈಲು ಹತ್ತುವ ಪ್ರಯಾಣಿಕರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ನಿಲ್ದಾಣದಲ್ಲಿ ಟಿಕೆಟ್ ಕೌಂಟರ್‍ಗಳನ್ನು ಮುಚ್ಚಲಾಗಿದ್ದು, ಸರ್ಕಾರದ ಸೂಚನೆ ಬರುವರೆವಿಗೂ ಟಿಕೆಟ್ ನೀಡುವ ವ್ಯವಸ್ಥೆ ಮಾಡಲಾಗುವುದಿಲ್ಲ. ಇನ್ನು ರೈಲುಗಾಡಿಗಳಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ರೀತಿಯಲ್ಲೇ ಪ್ರಯಾಣಿಕರು ಕುಳಿತು ಪ್ರಯಾಣಿಸಬಹುದಾಗಿದೆ.

LEAVE A REPLY

Please enter your comment!
Please enter your name here