Monday, August 15, 2022

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ ಇಂದೇ ಆನ್ ಲೈನ್ ಶಿಕ್ಷಣದ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಗುವುದು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಜ್ಯದಲ್ಲಿ ನಡೆಯುತ್ತಿರುವ ಆನ್ ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ಹೆಚ್ಚಾಗಿ ತೊಂದರೆಯಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿರುತ್ತದೆ.
ಆನ್ ಲೈನ್ ಶಿಕ್ಷಣ ಮಾರ್ಗದರ್ಶಿಯನ್ನು ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದ ಮೇರೆಗೆ ಸಿದ್ಧಪಡಿಸಲಾಗಿದೆ. ಸದರಿ ಮಾರ್ಗದರ್ಶಿ ಹಾಗೂ ವರದಿಯ ಆಧಾರ ಮೇರೆಗೆ, ರಾಜ್ಯದ ಎಲ್ಲಾ ಶಾಲೆಗಳು ಆನ್ ಲೈನ್ ಶಿಕ್ಷಣವನ್ನು ನಡೆಸುವಂತೆ ವಿವರವಾದ ಸುತ್ತೋಲೆಯನ್ನು ಇಂದೇ ಹೊರಡಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ಹೀಗಾಗಿ ಇಂದೇ ಆನ್ ಲೈನ್ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss