ಹೊಸ ದಿಗಂತ ವರದಿ, ಶಿವಮೊಗ್ಗ:
ಕೊರೋನಾ ನಿರ್ವಹಣೆ ಸಂರ್ಭ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸಿದ್ದ 27,650 ಆರೋಗ್ಯ ಕಾರ್ಯಕರ್ತರಿಗೆ ಆರಂಭಿಕ ಹಂತದಲ್ಲಿ ಕೊರೋನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಹೊಸದಿಗಂತ ಜೊತೆ ಮಾತನಾಡಿದ ಅವರು, ಕೊರೋನಾ ಲಸಿಕೆ ಜಿಲ್ಲೆಗೆ ಯಾವಾಗ ಬರುತ್ತದೆ ಎಂಬ ಮಾಹಿತಿಯಿಲ್ಲ. ಸೋಮವಾರ ಪ್ರಧಾನಮಂತ್ರಿಗಳು ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಮಾಹಿತಿ ದೊರೆಯಬಹುದು ಎಂದರು.
ನಾವು ಮಾರ್ಗಸೂಚಿ ಪ್ರಕಾರ ಮೂರು ಕಡೆಗಳಲ್ಲಿ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಒಟ್ಟು 130 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಪ್ರತಿ ದಿನ 100 ಮಂದಿಗೆ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ. ಇದರ ಉಸ್ತುವಾರಿಗೆ ಪ್ರತಿ ಕೇಂದ್ರದಲ್ಲಿ ಐವರ ತಂಡವನ್ನು ನಿಯೋಜಿಸಲಾಗುವುದು ಎಂದರು.