Wednesday, August 10, 2022

Latest Posts

ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಇಲ್ಲ: ಕೋಮಾ ಸ್ಥಿತಿಯಲ್ಲಿ ಪ್ರಣಬ್ ಮುಖರ್ಜಿ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಕೋಮಾ ಸ್ಥಿತಿಯಲ್ಲಿಯೇ ಇದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಅಲ್ಲಿನ ಸೇವಾ ಆಸ್ಪತ್ರೆ ತಿಳಿಸಿದೆ.

ಪ್ರಣಬ್ ಅವರಿಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತದೊತ್ತಡ ಮತ್ತು ನಾಡಿಮಿಡಿತ ಸ್ಥಿರವಾಗಿದೆ ಎಂದು ಸೇವಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆಗಸ್ಟ್ 10 ರಂದು ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಕಾರಣ ಆಸ್ಪತ್ರೆಗೆ ಪ್ರಣಬ್ ದಾಖಲಿಸಲಾಗಿದ್ದು, ಅವರಿಗೆ ಕೊರೋನಾ ಸೋಂಕು ಇರುವುದು ಕೂಡ ದೃಢಪಟ್ಟಿತ್ತು. ಸತತವಾಗಿ ವೈದ್ಯ ತಂಡ ಅವರಿಗೆ ಚಿಕಿತ್ಸೆ ನಡುತ್ತಿದೆ. ಆದರೆ ಆರೋಗ್ಯದಲ್ಲಿ ಚೇತರಿಕೆ ಇಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss