Saturday, July 2, 2022

Latest Posts

ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಹೊಸ ದಿಗಂತ ವರದಿ, ಶಿವಮೊಗ್ಗ:

ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಹೆಚ್ಚಿದ್ದು, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವುದರಿಂದ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕಡಿದಾಳ್ ಗೋಪಾಲ್ ಸರಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮುದಾಯದಲ್ಲಿ ಶೆ.80ರಷ್ಟು ಜನರು ಕೃಷಿ ಅವಲಂಬಿಸಿದ್ದಾರೆ. ಬಹುತೇಕರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದು, ಮೂಲಸೌಕರ್ಯ ವಂಚಿತರಾಗಿದ್ದಾರೆ ಎಂದರು.
ಒಕ್ಕಲಿಗ ಸಮುದಾಯಕ್ಕೆ ಶೇ.4 ರಷ್ಟು ಮಾತ್ರ ಮೀಸಲಾತಿ ನೀಡಲಾಗಿದೆ. ಕೃಷಿಯನ್ನೇ ನಂಬಿಕೊಂಡಿರುವ ಒಕ್ಕಲಿಗರು ಪ್ರಕೃತಿ ವಿಕೋಪಕ್ಕೆ ತುತ್ತಾಗುತ್ತಿದ್ದು, ನಷ್ಟ ಅನುಭವಿಸುವಂತಾಗಿದೆ. ಅನೇಕ ಕುಟುಂಬಗಳು ಇನ್ನೂ ಕಾಡಿನ ಮಧ್ಯೆ ವಾಸಿಸುತ್ತಿವೆ. ಈ ಬಡ ಕುಟುಂಬಗಳಿಗೆ ಸೌಲಭ್ಯ ನೀಡಲು ನಿಗಮದ ಅಗತ್ಯವಿದೆ ಎಂದು ಹೇಳಿದರು.
ಈಗಾಲೇ ಸರಕಾರ ವಿವಿಧ ಸಮುದಾಯಗಳಿಗೆ ಪ್ರಾಧಿಕಾರ ರಚನೆ ಮಾಡಿ ಸಾಕಷ್ಟು ಹಣ ಮೀಸಲಿಟ್ಟಿರುವುದು ಸ್ವಾಗತಾರ್ಹವಾಗಿದೆ. ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಅದಕ್ಕೆ 1000 ಕೋಟಿ ರೂ. ಬಿಡುಗಡೆ ಮಾಡಬೇಕು. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss