ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿದ್ದು, ಮಹತ್ವದ ಆದೇಶ ಹೊರಡಿಸಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ತುಳಸಿಮುನಿರಾಜುಗೌಡ ಅವರು ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಆರ್ ಆರ್ ನಗರದ ಉಪಚುನಾವಣೆ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೊರ್ಟ್ ವಜಾಗೊಳಿಸಿದ್ದು, ನಿಗದಿಯಂತೆ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದೆ.
ಅಕ್ಟೋಬರ್ 9ರಿಂದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇದ್ದು, ನ್ಯಾಯಾಲಯದ ತೀರ್ಪು ಎಲ್ಲರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತ್ತು. ನ್ಯಾಯಾಲಯದ ತೀರ್ಪಿನ ಬಳಿಕ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಿದೆ.