ಬೆಂಗಳೂರು: ಆರ್.ಆರ್ ನಗರದ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಯಶವಂತಪುರ ರೈಲ್ವೇ ನಿಲ್ದಾಣದಿಂದ ಮತ ಪ್ರಚಾರ ನಡೆಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಈಗಾಗಲೇ ಯಶವಂತಪುರದಲ್ಲಿ ಸಾವಿರಾರು ಕಾರ್ಯಕರ್ತರು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ನೇತೃತ್ವದಲ್ಲಿ ಭದ್ರತೆ ನೀಡಲಾಗಿದೆ. ಇದರಲ್ಲಿ ಒಬ್ಬರು ಡಿಸಿಪಿ,3 ಜನ ಎಸಿಪಿ,5 ಜನ ಇನ್ ಸ್ಪೆಕ್ಟರ್, 15 ಜನ ಸಬ್ ಇನ್ಸ್ಪೆಕ್ಟರ್,50 ಜನ ಪೊಲೀಸ್ ಸಿಬ್ಬಂದಿ ಹಾಗೂ 2 ಕೆಎಸ್ಆರ್ಪಿ,1 ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ. ಇನ್ನು ನೆರೆದಿರುವ ಕಾರ್ಯಕರ್ತರಲ್ಲಿ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.