Tuesday, June 28, 2022

Latest Posts

ಆರ್. ಆರ್. ನಗರ, ಶಿರಾ ಉಪ ಚುನಾವಣೆ: ಸರ್ಕಾರದ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಗೆಲ್ಲುವ ಸೂಚನೆ

ಮಂಗಳೂರು: ಕರ್ನಾಟಕ ಜನತೆ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಬೆಂಗಳೂರಿನ ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ನಿನ್ನೆ ಮುಗಿದಿದೆ. ಕೆಲವೇ ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ.

ರಾಜ್ಯ ಸರ್ಕಾರ ನಡೆಸಿರುವ ಆಂತರಿಕ ಸಮೀಕ್ಷೆಯಿಂದ ಶಿರಾ ಮತ್ತು ಆರ್. ಆರ್. ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸೂಚನೆಯಿದೆ. 15ರಿಂದ 20 ಸಾವಿರ ಮತಗಳ ಅಂತರದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಸರ್ಕಾರದ ಸಮೀಕ್ಷೆಯಿಂದ ತಿಳಿದುಬಂದಿದೆ.

ಬೆಂಗಳೂರಿನ ಆರ್ ಆರ್ ನಗರದಲ್ಲಿ ಶೇಕಡಾ 45.24 ರಷ್ಟು ಮತದಾನವಾಗಿದೆ, ಹಾಗೆಯೇ ಶಿರಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದ್ದು, ಶೇಕಡಾ 82.31ರಷ್ಟು ಆಗದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss