Monday, August 15, 2022

Latest Posts

ಆಲಮಟ್ಟಿ ಜಲಾಶಯ ಎತ್ತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವೆ: ಮುಖ್ಯಮಂತ್ರಿ ಯಡಿಯೂರಪ್ಪ

ವಿಜಯಪುರ: ಆಲಮಟ್ಟಿ ಜಲಾಶಯ ಎತ್ತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಅಣೆಕಟ್ಟೆಯ ಎತ್ತರ 519.60 ಮೀ. ದಿಂದ 524.256 ರ ವರೆಗೆ ಎತ್ತರಗೊಳಿಸಿ, ಈ ಭಾಗಕ್ಕೆ ಲಭ್ಯವಿರುವ 130 ಟಿಎಂಸಿ ನೀರು ಬಳಕೆಗೆ ಸೂಕ್ತ ಯೋಜನೆ ರೂಪಿಸಲಾಗುವುದು ಎಂದರು.
ಈಗಾಗಲೇ ನೀರಾವರಿ ಸಚಿವ ರಮೇಶ ಜಾರಕಿಹೊಳಿ, ಕೇಂದ್ರದ ಜಲ ಸಂಪನ್ಮೂಲ ಸಚಿವರನ್ನ ಭೇಟಿ ಮಾಡಿ, ಈ ಕುರಿತು ಮಾತನಾಡಿದ್ದಾರೆ ಎಂದರು.
ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇರುವುದು ನಿಜ. ಆದ್ರೆ ಸಂಪನ್ಮೂಲ ಕ್ರೂಡಿಕರಣ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ‌ ಎಂದರು.
ಬೆಳೆ ಹಾನಿ, ಮನೆಗಳ ದುರಸ್ತಿಗೆ ಹಣ ಸದುಪಯೋಗ ಮಾಡಿಕೊಳ್ಳಲಾಗುತ್ತಿದೆ.
ಯಾವುದೇ ಕಾರಣಕ್ಕೂ ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಅಲ್ಲದೆ ಮುಂದಿನ ತಿಂಗಳು ನಾನು ಪ್ರಧಾನಿ ಅವರನ್ನ ಭೇಟಿ ಮಾಡಿ ಆಲಮಟ್ಟಿ ಜಲಾಶಯದ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದರು.
ಡಿಸಿಎಂ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ. ಪಾಟೀಲ ಸೇರಿದಂತೆ ಮತ್ತಿತರರು ಇದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss