Wednesday, August 10, 2022

Latest Posts

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಪಿತೃವಿಯೋಗ: ಟೂರ್ನಿಯಿಂದ ಹೊರಗುಳಿದ ಸಹೋದರರು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ನಿಧನರಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯಾ(71) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬರೋಡಾ ಪರ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಪಂದ್ಯವಾಡುತ್ತಿದ್ದ ಹಾರ್ದಿಕ್ ಪಾಂಡ್ಯಾ ಹಾಗೂ ಬಯೋ ಬಬಲ್ ಟೂರ್ನಿ ಆಡುತ್ತಿದ್ದ ಕೃನಾಲ್ ಪಾಂಡ್ಯ ಅವರು ಪಂದ್ಯ ತೊರೆದು ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಲು ತೆರಳಿದ್ದಾರೆ.

ತಂದೆಯನ್ನು ಕಳೆದುಕೊಂಡಿರುವ ಕೃನಾಲ್ ಮತ್ತು ಹಾರ್ದೀಕ್ ಪಾಂಡ್ಯ ಗೆ ಬರೋಡಾ ಕ್ರಿಕೆಟ್ ಅಸೋಸಿಯೇಶನ್ ಸಂತಾಪ ಸೂಚಿಸಿದ್ದು, ಕೃನಾಲ್ ಅವರು ಬಯೋ ಬಬಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಎ ಸಿಇಒ ಶಿಶಿರ್ ಹತ್ತಾಂಗಡಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss