Monday, July 4, 2022

Latest Posts

ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ: ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ ಆರೋಪಿಗಳು

ಮಂಗಳೂರು: ಮಂಗಳೂರು ತಾಲೂಕಿನ ಮಲ್ಲೂರಿನಲ್ಲಿ ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ ಇಬ್ಬರು ಎಸ್ ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಬ್ರಾಹಿಂ ಎಂಬವರ ಪುತ್ರ ಇಸ್ಮಾಯಿಲ್ (45) ಮತ್ತು ಅಜಂ ಎಂಬವರ ಪುತ್ರ ಅಶ್ರಫ್ (32) ಬಂಧಿತ ಆರೋಪಿಗಳು.
ಮಲ್ಲೂರಿನ ಆಶಾ ಕಾರ್ಯಕರ್ತೆ ವಸಂತಿ ಎಂಬವರು ಆರೋಗ್ಯ ಇಲಾಖೆಯ ಸೂಚನೆಯಂತೆ ಕೊರೋನಾ ಸೋಂಕು ಸಂಬಂಧಿಸಿ ಮಾಹಿತಿಗಾಗಿ ತೆರಳಿದಾಗ ಆರೋಪಿಗಳು ಅವರನ್ನು ಅವಾಚ್ಯ ಶಬ್ದಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ. ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಒಡ್ಡಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಯಿಂದ ಸರಕಾರದ ಸೂಚನೆಯಂತೆ ಕೆಲಸ ಮಾಡುತ್ತಿದ್ದ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ಈ ಸಂಬಂಧ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಜನರ ಒಳಿತಿಗಾಗಿ ಎಲ್ಲರೂ ಸಹಕರಿಸಬೇಕು
ಈಗಿನ ಪರಿಸ್ಥಿತಿಯಲ್ಲಿ ಸರಕಾರಿ ಸೇವೆಯಲ್ಲಿರುವವರಿಗೆ ಸೇಡಿನಲ್ಲಿ ಅಥವಾ ಯಾವುದೇ ರೀತಿಯ ಕಿರುಕುಳ ನೀಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ. ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೊರೊನಾ ತಡೆಯಲು ಸರಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರ ಒಳಿತಿಗಾಗಿ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss