ಹೊಸದಿಲ್ಲಿ: ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ. ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯುವಂತೆ ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸ್ಪಂದಿಸಿರುವ ಸಚಿವ ಶ್ರೀರಾಮುಲು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 12 ಸಾವಿರ ರೂ. ಮಾಸಿಕ ವೇತನ ನೀಡಬೇಕೆಂದು ಕಾರ್ಯಕರ್ತೆಯರು ಬೇಡಿಕೆ ಸಲ್ಲಿಸಿದ್ದಾರೆ. ಈ ಕುರಿತು ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಅವರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಗಳು ಬದ್ಧವಾಗಿವೆ ಎಂದರು.
ಇಲಾಖೆಯ ಅಧಿಕಾರಿಗಳಿಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಲು ಸೂಚಿದ್ದೇನೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಣಕಾಸು ಇಲಾಖೆಗೆ ಪತ್ರ ಬರೆಯಲಾಗಿದೆ. ಸರ್ಕಾರ ಕಾರ್ಯಕರ್ತೆಯರ ಜೊತೆ ಇರಲಿದೆ. ಅವರು ಆತಂಕಪಡುವ ಅಗತ್ಯವಿಲ್ಲ ಎಂದು ಶ್ರೀರಾಮುಲು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.