spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಆಸ್ಟ್ರೇಲಿಯಾ ಪ್ರಧಾನಿಯ ಭಾರತ ಪ್ರವಾಸ ರದ್ದು.

ನವದೆಹಲಿ: ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮ್ಯಾರಿಸಾನ್ ಕಾಡ್ಗಿಚ್ಚಿನ ಕಾರಣದಿಂದ ಭಾರತ ಪ್ರವಾಸವನ್ನು ರದ್ದು ಮಾಡಿಕೊಂಡಿದ್ದಾರೆ.

ಪ್ರಧಾನಿ ಸ್ಕಾಟ್ ಮ್ಯಾರಿಸಾನ್ ಜನವರಿ 13ರಿಂದ 16ರವರೆಗೆ ಭಾರತ ಪ್ರವಾಸ ನಿಗಧಿಮಾಡಿದ್ದರು. ಆದರೆ ಆಸ್ಟ್ರೇಲಿಯಾದಲ್ಲಿ ನಡೆದ ಬೆಂಕಿ ಅನಾಹುತದ ಕಾರಣ ಪ್ರವಾಸ ನಿಲ್ಲಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಇದಾಗಲೇ 20 ಜನರ ಪ್ರಾಣ ಹೋಗಿರುವುದರಿಂದ  ಯಾವುದೇ ರೀತಿಯ ಅವಘಡ ನಡೆಯದಂತೆ ನೋಡಿಕೊಳ್ಳಲು, ಪ್ರದಾನಿ ಸ್ಕಾಟ್ ಮ್ಯಾರಿಸಾನ್ ರಾಜ್ಯ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದ್ದಾರೆ. ಸ್ಕಾಟ್ ಮ್ಯಾರಿಸಾನ್ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ದೇಶದಲ್ಲಿ ಆಗಿರುವ ನಷ್ಟಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಕ್ಟೋರಿಯಾ ಮತ್ತು ನ್ಯೂ ಸೌತ್ ವೇಲ್ಸ್ ಎರಡೂ ರಾಜ್ಯಗಳು  ಹೆಚ್ಚು ಬೆಂಕಿಗೆ ಆಹುತಿಯಾಗುತ್ತಿದೆ. ಬೆಂಕಿಯನ್ನು ನಂದಿಸಲು ಅತಿ ಹೆಚ್ಚು ಸಂಖ್ಯೆಯಲ್ಲಿ ಸ್ವಯಂ ಸೇವಕರು,ಅಗ್ನಿಶಾಮಕ ಹೋರಾಟಗಾರರು ಶ್ರಮಪಟ್ಟಿದ್ದಾರೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮ್ಯಾರಿಸಾನ್ ಹೇಳಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಧಾನಿ ಸ್ಕಾಟ್ ಮ್ಯಾರಿಸಾನ್ ಅದಕ್ಕೆ ಬೇಕಾದ ವ್ಯವಸ್ಥೆಯಲ್ಲಿ ನಿರತರಾಗಿದ್ದಾರೆ.

 

 

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap