ಹೊಸದಿಗಂತ ಆನ್ ಲೈನ್ ಡೆಸ್ಕ್:
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಳ್ಳಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಗಾಯಾಳು ಉಮೇಶ್ ಯಾದವ್ ಜಾಗಕ್ಕೆ ಟಿ. ನಟರಾಜನ್ ಅವಕಾಶ ಪಡೆದಿದ್ದಾರೆ. ಎರಡನೇ ಟೆಸ್ಟ್ ಪಂದ್ಯದ ವೇಳೆ ಉಮೇಶ್ ಯಾದವ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಆಯ್ಕೆ ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಈಗಾಗಲೇ ನಟರಾಜನ್, ಟಿ-20 ಪಂದ್ಯದಲ್ಲಿ ತಮ್ಮ ಬೌಲಿಂಗ್ ಸಾಮರ್ಥ್ಯ ತೋರಿಸಿದ್ದಾರೆ. ಉದಯೋನ್ಮುಖ ವೇಗಿ ನಟರಾಜನ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು.
ಕಾಂಗರೂ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಪೈಕಿ ಈಗಾಗಲೇ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ತಲಾ ಒಂದು ಪಂದ್ಯಗಳಲ್ಲಿ ಗೆಲುವು ದಾಖಲಿಸಿವೆ.