ಹೊಸದಿಗಂತ ಆನ್ ಲೈನ್ ಡೆಸ್ಕ್:
ಲೋ ಶುಗರ್ನಿಂದ ಅಸ್ವಸ್ಥಗೊಂಡಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಇಂದು ವೈದ್ಯರ ಸಲಹೆಯ ಮೇರೆಗೆ ನಗರದ ಆಸ್ಟರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾನುವಾರ ಬಿಜೆಪಿ ಕಾರ್ಯಕಾರಣಿ ಸಭೆ ಮುಗಿಸಿ ವಾಪಾಸಾಗುವ ವೇಳೆ ಡಿ.ವಿ ಸದಾನಂದಗೌಡ ಲೋ ಶುಗರ್ನಿಂದ ಅಸ್ವಸ್ಥಗೊಂಡಿದ್ದರು, ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರು ನಗರದ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿತಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.