ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ “ಮೂರು ದಿನದ ಹಿಂದೆ ಮದುವೆ ಊಟ ಮಾಡಿದ್ದರ ಪರಿಣಾಮ ಅಜೀರ್ಣವಾಗಿತ್ತು. ಅಜೀರ್ಣ ಮಾತ್ರೆ ಬದಲು ನಿದ್ದೆ ಮಾತ್ರೆ ಸೇವಿಸಿದ್ದೆ”.
“ನನಗೆ ನಿದ್ದೆ ಬರದಿದ್ದಾಗ ನಿದ್ದೆ ಮಾತ್ರೆ ಸೇವಿಸುವ ಅಭ್ಯಾಸವಿದೆ. ಅರ್ಧ ಮಾತ್ರೆ ಸೇವಿಸುತ್ತಿದ್ದೆ, ಮೊನ್ನೆ ಇಡೀ ಮಾತ್ರೆ ಸೇವಿಸಿದ್ದೆ. ರಾಜಕೀಯ ಒತ್ತಡ ಯಾವತ್ತಿಗೂ ಇರುತ್ತದೆ. ಅದಕ್ಕಾಗಿ ಮಾತ್ರೆ ತೆಗೆದುಕೊಳ್ಳುವುದು, ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ನಾನಲ್ಲಾ” ಎಂದು ಸ್ಪಷ್ಟನೆ ನೀಡಿದ್ದಾರೆ.
ಹಾಗೆಯೇ ಡಿಕೆಶಿ ಅವರ ಆರೋಪಕ್ಕೂ ಪ್ರತಿಕ್ರಿಯಿಸಿದ ಸಂತೋಷ್ ಉಪ ಚುನಾವಣೆ ಸೋಲಿನ ನಂತರ ಡಿಕೆಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ, ಅವರನ್ನು ಅವರ ಪಕ್ಷದ ಹಿರಿಯ ನಾಯಕರು ಯಾವುದಾದರೂ ಉತ್ತಮ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕೆಂದು ಹೇಳಿದರು.