Monday, August 8, 2022

Latest Posts

ಆ್ಯಂಕರ್ ಅನುಶ್ರೀ ಕುರಿತು ಶಾಕಿಂಗ್ ವಿಚಾರ ಬಾಯ್ಬಿಟ್ಟ ಡ್ರಗ್ಸ್ ಪೆಡ್ಲರ್: ಮತ್ತೆ ವಿಚಾರಣೆ ಎದುರಿಸುವ ಸಾಧ್ಯತೆ

ಮಂಗಳೂರು: ಟಿವಿ ಆ್ಯಂಕರ್, ನಟಿ ಮಂಗಳೂರು ಮೂಲದ ಅನುಶ್ರೀ ಡ್ರಗ್ಸ್ ಪಾರ್ಟಿಗಳಲ್ಲಿ ಭಾಗವಹಿಸಿರುವ ಬಗ್ಗೆ ಬಂಧಿತ ಡ್ರಗ್ಸ್ ಪೆಡ್ಲರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಶ್ರೀ ಮತ್ತೆ ವಿಚಾರಣೆ ಎದುರಿಸುವ ಸಾಧ್ಯತೆ ನಿಚ್ಚಳವಾಗಿದೆ.
ಮಂಗಳೂರಿನಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಪಾರ್ಟಿಗಳಲ್ಲಿ ಪಾಲ್ಗೊಂಡ ಬಗ್ಗೆ ಇತ್ತೀಚೆಗೆ ವಿಚಾರಣೆಗೆ ಹಾಜರಾಗಿದ್ದ ಅನುಶ್ರೀ ಡ್ರಗ್ಸ್ ಪಾರ್ಟಿಗಳಲ್ಲಿ ಭಾಗವಹಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಮಂಗಳೂರು ಸಿಸಿಬಿ ಪೊಲೀಸರಿಂದ ಬೆಂಗಳೂರಿನಲ್ಲಿ ಬಂಧಿತನಾಗಿರುವ ಪ್ರಮುಖ ಡ್ರಗ್ಸ್ ಪೆಡ್ಲರ್, ನೈಜಿರಿಯಾ ಪ್ರಜೆ ಈ ಬಗ್ಗೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದು, ನಾನು ಭಾಗವಹಿಸಿದ ಪಾರ್ಟಿಗಳಲ್ಲಿ ಅನುಶ್ರೀ ಪಾಲ್ಗೊಂಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಅನುಶ್ರೀ ಮತ್ತೆ ಪೊಲೀಸರ ವಿಚಾರಣೆಗೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss