ಬೆಂಗಳೂರು: ಮಲೆನಾಡು ಕರಾವಳಿ ಭಾಗದಲ್ಲಿ ಕಳೆದ ನಾಲ್ಕು ದಿನದಿಂದಲೂ ಮಳೆಯಾಗುತ್ತಲೇ ಇದೆ. ಹವಮಾನ ಇಲಾಖೆ ಮುನ್ಸೂಚನೆಯಂತೆ ಆಗಸ್ಟ್ ೨೩ರವರೆಗೂ ಕರಾವಳಿ ಬಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನಿನ್ನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇತ್ತು. ಶಿರಸಿ, ಸಿದ್ದಾಪುರ, ಯಲ್ಲಾಪುರ, ಕುಮಟಾ, ಹೊನ್ನಾವರ ಭಟ್ಕಳದಲ್ಲಿ ಮಳೆ ಸಾಧಾರಣವಾಗಿತ್ತು. ಆದರೆ ಇಂದಿನಿಂದ ಮಳೆ ಭಾರೀ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಞಿಣ ಕನ್ನಡ, ಉತ್ತರಕನ್ನಡ, ಉಡುಪಿ ಭಾಗದಲ್ಲಿ ಮಳೆ ಹೆಚ್ಚು ಸುರಿಯಬಹುದೆಂದು ಆಗಸ್ಟ್ ೧೯ ರಿಂದ ಆಗಸ್ಟ್ ೨೩ರವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.