spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂಗ್ಲೆಂಡ್-ಭಾರತ ಮೊದಲ ಟೆಸ್ಟ್ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಗೊಂಡ ರೂಟ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂಗ್ಲೆಂಡ್​ ಮತ್ತು ಭಾರತ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್​ ಸರಣಿ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಟಾಸ್​ ಗೆದ್ದ ಇಂಗ್ಲೆಂಡ್​ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಕಣಕ್ಕಿಳಿಯುತ್ತಿದ್ದು, ಅವರು 2 ವರ್ಷಗಳ ಬಳಿಕ ಟೆಸ್ಟ್​ ತಂಡಕ್ಕೆ ಮರಳುತ್ತಿದ್ದಾರೆ. 2019ರ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ಮೊದಲ ಟೂರ್ನಮೆಂಟ್​ನಲ್ಲಿ ಅವರು ತಮ್ಮ ಕೊನೆಯ ಟೆಸ್ಟ್​ ಪಂದ್ಯವನ್ನಾಡಿದ್ದರು.
ಭಾರತ ತಂಡದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ ಈ ಪಂದ್ಯದಲ್ಲಿ ಅವಕಾಶ ಪಡೆದಿಲ್ಲ, ಇವರ ಬದಲಾಗಿ ಶಾರ್ದುಲ್ ಠಾಕೂರ್​ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ 4 ವೇಗಿಗಳಿದ್ದರೆ, ಜಡೇಜಾ ಏಕೈಕ ಸ್ಪಿನ್ನರ್ ಆಗಿ ಅವಕಾಶ ಪಡೆದಿದ್ದಾರೆ.
ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್​ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್​, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ,ಮೊಹಮ್ಮದ್ ಸಿರಾಜ್ಇಂ
ಇಂಗ್ಲೆಂಡ್: ರೋರಿ ಬರ್ನ್ಸ್, ಡಾಮ್ ಸಿಬ್ಲೆ, ಜ್ಯಾಕ್ ಕ್ರಾಲಿ, ಜೋ ರೂಟ್ (ನಾಯಕ), ಜಾನಿ ಬೈರ್​ಸ್ಟೋವ್​, ಡ್ಯಾನ್ ಲಾರೆನ್ಸ್, ಜೋಸ್ ಬಟ್ಲರ್, ಸ್ಯಾಮ್​ ಕರ್ರನ್, ಆಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss