ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಆಸ್ಟ್ರೇಲಿಯಾ ಪ್ರವಾಸದಲ್ಲಿ ಗೆಲುವು ಕಂಡ ಭಾರತ ಇದೀಗ ಮತ್ತೊಂದು ಸುದೀರ್ಘ ಸರಣಿಗೆ ಸಜ್ಜಾಗುತ್ತಿದೆ. ಮುಂದಿನ ತಿಂಗಳು ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರವಾಸ ಬರಲಿದ್ದು, ಭಾರತ-ಇಂಗ್ಲೆಂಡ್ ತಂಡಗಳು 4 ಪಂದ್ಯಗಳ ಟೆಸ್ಟ್ ಸರಣಿ, 5 ಪಂದ್ಯಗಳ ಟಿ20ಐ ಮತ್ತು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ.
ಈ ಹಿನ್ನೆಲೆ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಿಗಾಗಿ ಬಿಸಿಸಿಐ ತಂಡ ಪ್ರಕಟಿಸಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ಗೆ ಭಾರತ ತಂಡ:
ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಅಕ್ಸರ್ ಪಟೇಲ್, ಚೇತೇಶ್ವರ ಪೂಜಾರ, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ಮಾಯಾಂಕ್ ಅಗರ್ವಾಲ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ರಿಷಭ್ ಪಂತ್ (ಡಬ್ಲ್ಯೂಕೆ), ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್, ಶುಬ್ಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ವೃದ್ಧಿಮಾನ್ ಸಹಾ (ಡಬ್ಲ್ಯೂಕೆ).