ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಸಿದ ಐವರು ಪಂಜಾಬಿನ ನಿವಾಸಿಗಳು ಎಂದು ತಿಳಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದರು.
15-20 ಮಂದಿ ಪಂಜಾಬ್ ಯುವಾ ಕಾಂಗ್ರೆಸ್ ಕಾರ್ಯಕರ್ತರು ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಿದ್ದರು.