Sunday, June 26, 2022

Latest Posts

ಇಂಡೋನೇಷ್ಯಾದಲ್ಲಿ ‘ಜಲಪ್ರಳಯ’: ನೆರೆಯಲ್ಲಿ ತತ್ತರಿಸಿವೆ 2,700ಕ್ಕೂ ಅಧಿಕ ಕುಟುಂಬಗಳು!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂಡೋನೇಷ್ಯಾದ ಮೆಡನ್ ನಗರದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ಸುಮಾರು 2,700ಕ್ಕೂ ಅಧಿಕ ಮನೆಗಳು ನೆರೆಗೆ ಸಿಲುಕಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಉತ್ತರ ಸುಮಾತ್ರಾದಲ್ಲಿ ಆರು ಮಂದಿ ಕಾಣೆಯಾಗಿದ್ದು, ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಲವಾರು ಪ್ರದೇಶಗಳಲ್ಲಿ ನೀರಿನ ಮಟ್ಟ 5 ಮೀಟರ್​ಗಿಂತಲೂ ಹೆಚ್ಚಿದ್ದು, ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಹಲವೆಡೆ ಭೂ ಕುಸಿತ ಉಂಟಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.
ಈ ವರ್ಷದ ಆರಂಭದಲ್ಲಿ ಜಕಾರ್ತಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂ ಕುಸಿತ 60 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss