June 17, 2026
Wednesday, June 17, 2026
spot_img

ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಅಲ್ಲಲ್ಲಿ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕಳೆದ ಒಂದು ತಿಂಗಳಿಂದ ಸುರಿಯುತ್ತಿದ್ದ ಮಳೆ ಇಂದಿನಿಂದ ಕೊಂಚ ಬಿಡುವು ಪಡೆಯಲಿದೆ. ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !