spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದಿನಿಂದ ರಾಜ್ಯದಲ್ಲಿ ಹೆಚ್ಚಲಿದೆ ಕೊರೋನಾ ಲಸಿಕೆ ಅಭಿಯಾನ ಕೇಂದ್ರ: ಸಚಿವ ಕೆ.ಸುಧಾಕರ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದಿನಿಂದ ಕೊರೋನಾ ಲಸಿಕೆ ಅಭಿಯಾನ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೊರೋನಾ ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಡಾ. ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೂ ಯಾವುದೇ ಸಮಸ್ಯೆಯಾಗಿಲ್ಲ. ಲಸಿಕೆಯ ಮೇಲೆ ವಿಶ್ವಾಸವಿಡಿ. ಲಸಿಕೆ ಪಡೆದವರು ಮೈ ಮರೆಯುದೇ, ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲೇ ಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಮೊದಲ ದಿನವೇ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಕಾರಣಾಂತರಗಳಿಂದ ಲಸಿಕೆ ಪಡೆಯದವರು ಮತ್ತೆ ಲಸಿಕೆ ಪಡೆಯಲು ಅವಕಾಶವಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಶೇ.70 ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss