Wednesday, July 6, 2022

Latest Posts

ಇಂದು ಅಸ್ಸಾಂ,ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಚುನಾವಣಾ ಕಣವಾಗಿರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ಮೋದಿ ಇಂದು ಭೇಟಿ ನೀಡಲಿದ್ದಾರೆ.
ಹಲವು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೊದಲು ಅಸ್ಸಾಂಗೆ ಭೇಟಿ ನೀಡಲಿದ್ದು, ಸೋಮ್, ಮಾಲಾ ಎಂಬ ಎರಡು ಆಸ್ಪತ್ರೆಗಳ ಶಂಕುಸ್ಥಾಪನೆ, ಸೋನಿತ್‌ಪುರ ಜಿಲ್ಲೆಯ ಧೇಕಿಯಾಜುಲಿಯಲ್ಲಿ ರಾಜ್ಯ ಹೆದ್ದಾರಿ ಮತ್ತು ಪ್ರಮುಖ ಜಿಲ್ಲಾ ರಸ್ತೆಗಳ ಕಾರ್ಯಕ್ರಮ ಅಸೋಮ್ ಮಾಲಾಕ್ಕೆ ಚಾಲನೆ ನೀಡಲಿದ್ದಾರೆ.
ನಂತರ ಪಶ್ಚಿಮ ಬಂಗಾಳದ ಹಲ್ದಿಯಾಕ್ಕೆ ಭೇಟಿ ನೀಡಲಿದ್ದು, 1,100 ಕೋಟಿ ರೂ. ಬಂಡವಾಳ ಹೂಡಿಕೆಯಲ್ಲಿ ನಿರ್ಮಾಣ ಮಾಡಿರುವ ಮತ್ತು ಪಶ್ಚಿಮ ಬಂಗಾಳದ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಿರ್ಮಿಸಿರುವ ಎಲ್‌ಪಿಜಿ ಆಮದು ಟರ್ಮಿನಲ್‌ನ್ನು ಉದ್ಧಾಟಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss