Tuesday, July 5, 2022

Latest Posts

ಇಂದು ಎಸ್​.ಎಂ. ಕೃಷ್ಣ ಮೊಮ್ಮಗ- ಡಿಕೆಶಿ ಪುತ್ರಿ ಮದುವೆ ನಿಶ್ಚಿತಾರ್ಥ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯಾ ಹಾಗೂ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಹೆಗ್ಡೆ ಪುತ್ರ ಅಮಾರ್ತ್ಯ ಹೆಗ್ಡೆ ಅವರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಲಿದೆ. 

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿರುವ ಖಾಸಗಿ ಹೋಟೆಲ್ ನ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಕಳೆದ ಜೂನ್ 12 ರಂದು ಮದುವೆ ಮಾತುಕತೆ ನಡೆದಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. 2021 ರ ಫೆಬ್ರವರಿಯಲ್ಲಿ ಅಮಾರ್ತ್ಯ ಹೆಗ್ಡೆ ಮತ್ತು ಐಶ್ವರ್ಯಾ ಅವರ ಮದುವೆ ನೆರವೇರಲಿದೆ.

ಅಮಾರ್ತ್ಯ ಹೆಗ್ಡೆ ಕಾಫಿಡೇ ವ್ಯವಹಾರ ನೋಡಿಕೊಳ್ಳುತ್ತಿದ್ದು, ಐಶ್ವರ್ಯಾ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ, ನಿಶ್ಚಿತಾರ್ಥ ಕಾರ್ಯಕ್ರಮ ಡಿಕೆಶಿ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss