ಬೆಂಗಳೂರು: ಕೊರೋನಾ ಭೀತಿ ಮಧ್ಯೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಬರಲಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಸಿಎಂ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ಇಂದು ಎಸ್ಎಸ್ಎಲ್ಸಿ ಫಲಿತಾಂಶಗಳು ಪ್ರಕಟವಾಗಲಿದ್ದು, ಎಲ್ಲ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ನಿಮ್ಮ ತಂದೆ,ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ. ಶುಭವಾಗಲಿ ಎಂದು ಟ್ವೀಟ್ ಮಾಡುವ ಮೂಲಕ ಎಲ್ಲರಿಗೂ ಶುಭ ಹಾರೈಸಿದ್ದಾರೆ.