ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಶಾಲೆಗಳಿಗೆ ಸರ್ಕಾರ ಸರಿಯಾಗಿ ಅನುದಾನ ನೀಡದಿರುವುದನ್ನು ವಿರೋಧಿಸಿ ಕಲ್ಯಾಣ ಕರ್ನಾಟಕದಲ್ಲಿ ಇಂದು ಸುಮಾರು 1,500 ಅನುದಾನ ರಹಿತ ಖಾಸಗಿ ಶಾಲೆಗಳು ಬಂದ್ ಆಗಲಿವೆ.
ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿನ ಶಾಲೆಗಳನ್ನು 371 ಜೆ ಕಾಯ್ದೆಯಡಿ ಅನುದಾನಕ್ಕೆ ಸೇರ್ಪಡೆಯಾಗಲಿಲ್ಲ. ಸೇರ್ಪಡೆಯಾಗದ ಶಾಲೆಗಳನ್ನು ಅನುದಾನಕ್ಕೆ ಸೇರ್ಪಡೆ ಮಾಡಬೇಕೆಂದು ಖಾಸಗಿ ಶಾಲಾ ಒಕ್ಕೂಟ ಒತ್ತಾಯಿಸಿದೆ.
ಈ ಬಗ್ಗೆ ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದ್ದರೂ ಕೂಡ ಇಲ್ಲಿ ತನಕ ಸರ್ಕಾರ ಬರೋಬ್ಬರಿ ಏಳು ವರ್ಷವಾದ್ರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಬೇಕಾದ ಅನುದಾವನ್ನು ನೀಡಿಲ್ಲ, ಇದರಿಂದ, ಶಾಲೆಗಳು ಮುಚ್ಚುವ ಹಂತವನ್ನು ತಲುಪಿದೆ.
ಕಳೆದ ವರ್ಷ ಬಂದ 1500 ಕೋಟಿ ರೂ.ಅನುದಾನದಲ್ಲಿ 5 ಕೋಟಿ ರೂ. ಮಾತ್ರ ಬಳಕೆಯಾಗಿದೆ. ಬಾಕಿ ಹಣ ಸರ್ಕಾರಕ್ಕೆ ವಾಪಸ್ ಹೋಗಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟವು ಅನುದಾನ ನೀಡುವಂತೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿತ್ತು.