ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿದ್ದ ನಟಿ ಪೂಜಾ ಹೆಗಡೆಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತೆಲುಗು ಚಿತ್ರ ರಂಗದಲ್ಲಿ ಭಾರಿ ಬೇಡಿಕೆ ಹೊಂದಿರುವ ನಟಿ ಪೂಜಾ ಹೆಗಡೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಹುಟ್ಟುಹಬ್ಬದ ಪ್ರಯುಕ್ತ ರಾಧೆ ಶ್ಯಾಮ್ ಚಿತ್ರದಿಂದ ಭರ್ಜರಿ ಉಡುಗೊರೆ ಸಿಕ್ಕಿದೆ. ಅದು ಏನಾಪ್ಪ ಅಂದರೆ ಪೂಜಾ ಹೆಗಡೆ ಲುಕ್ ಅನ್ನು ರಿವೀಲ್ ಮಾಡಲಾಗಿದೆ. ಚಿತ್ರ ದಲ್ಲಿ ಪ್ರೇರಣಾ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂಪ್ರದಾಯಸ್ಥ ಕುಟುಂಬದ ಹೆಣ್ಣುಮಗಳ ಪಾತ್ರವಾಗಿದ್ದು, ಪೂಜಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ