ಬೆಂಗಳೂರು : ಉತ್ತರ ಆಂಧ್ರಪ್ರದೇಶದ ಕರಾವಳಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವ ಪರಿಣಾಮ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಢ, ಗದಗ ಹಾವೇರಿ, ಕಲ್ಬರ್ಗಿ, ರಾಯಚೂರು, ಯಾದಗಿರಿ, ವಿಜಪುರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.