Sunday, June 26, 2022

Latest Posts

ಇಂದು ನಾಳೆ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡಿನಲ್ಲಿ ಇಂದು ನಾಳೆಯೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಉಡುಪಿ, ದ.ಕ ಹಾಗೂ ಉ.ಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ, ಕೋಲಾರ, ಕೊಡಗು, ಬೆಂಗಳೂರು, ಧಾರವಾಡ, ಹಾಸನ, ಬೀದರ್, ಬೆಳಗಾವಿ ಹಾಗೂ ಚಿಕ್ಕಬಳ್ಳಾಪುರ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss