Tuesday, June 28, 2022

Latest Posts

ಇಂದು ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ: ರಾಜಕೀಯದಲ್ಲಿ ಹೆಚ್ಚಾದ ಕುತೂಹಲ

ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಮಳೆಗಾಲದ ಅಧಿವೇಶನದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆ ಕುರಿತಾಗಿ ಹಲವಾರು ಬೇಡಿಕೆಗಳಿ ಈಗಾಗಲೇ ಹೈಕಮಾಂಡ್ ವರೆಗೂ ತಲುಪಿದ್ದು, ಈ ರಾಜ್ಯ ನಾಯಕರ ಭೇಟಿ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಬಿ.ಎಸ್ ವೈ ನಾಯಕತ್ವ ಪಡೆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಮೈತ್ರಿ ಸರ್ಕಾರ ಆಡಳಿತದಲ್ಲಿದ್ದಾಗ 515 ಕೋಟಿ ರೂ ಗಳನ್ನು ಪರಿಹಾರ ಘೋಷಿಸಲಾಗಿತ್ತು. ಆದರೆ ಈಗ ಯಾವುದೇ ಉತ್ತಮ ಅನುದಾನ ಘೋಷಣೆಯಾಗಿಲ್ಲ. ಕೇವಲ 16 ಕೋಟಿ ರೂ. ಘೋಷಣೆ ಮಾಡಲಾಗಿದೆ ಎಂದು ತಿಳಿಸಿರುವುದಾಗಿ ಹೆಚ್.ಡಿ.ಕೆ ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss