Wednesday, August 17, 2022

Latest Posts

ಇಂದು ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ: ಪ್ರಧಾನಿ ಮೋದಿ ಸೇರಿ, ಗಣ್ಯರಿಂದ ಗೌರವ ನಮನ

ನವದೆಹಲಿ:  ಇಂದು ದೇಶದ ಎರಡನೇ ಪ್ರಧಾನಿಯಾಗಿದ್ದ  ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮಾ ಗಾಂಧಿ ಜನ್ಮದಿನ. ಈ ನಿಮಿತ್ತ ಪ್ರಧಾನಿ ಮೋದಿ ಸೇರಿದಂತೆ ದೇಶದ ಅನೇಕ ನಾಯಕರು ಅವರನ್ನು ಸ್ಮರಿಸಿದ್ದಾರೆ.

ಪ್ರಧಾನಿ ಮೋದಿಯವರು ದೆಹಲಿಯ ವಿಜಯ ಘಾಟ್ ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಮಾಧಿಗೆ  ಮತ್ತು ಗಾಂಧೀಜಿಯವರ ಸ್ಮಾರಕ ರಾಜ್’ಘಾಟ್ ಗೆ ತೆರಳಿ ನಮನ ಸಲ್ಲಿಸಿದರು. ಇತರ ಗಣ್ಯರು ಸಹ ಗೌರವ ನಮನ ಸಲ್ಲಿಸಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿಯವ ಜನ್ಮದಿನ ಹಿನ್ನೆಲೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ  ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶದ ಕಲ್ಯಾಣಕ್ಕಾಗಿಯೇ ಬದುಕಿದವರು. ವಿನಯ ಸ್ವಭಾವ ಹಾಗೂ ದೃಢ ನಿಲುವಿನ ವ್ಯಕ್ತಿಯಾಗಿದ್ದರೆ. ಅವರು ಭಾರತ ದೇಶಕ್ಕಾಗಿ ಮಾಡಿದ ಕೆಲಸವನ್ನು ಈ ಸಂದರ್ಭದಲ್ಲಿ ಕೃತಜ್ಞತೆ ಭಾವದಿಂದ ನೆನೆಯುತ್ತೇನೆ ಎಂದರು.

ಹಾಗೆಯೇ ಮಹಾತ್ಮ ಗಾಂಧೀಜಿಯವರ ಜನ್ಮದಿನ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ ಮೋದಿ ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸುವಲ್ಲಿ ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!