ನವದೆಹಲಿ: ಇಂದು ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಇದೇ ಮೊದಲ ಬಾರಿಗೆ ನಡೆಯುತ್ತಿದೆ. ಇಂದು ೯ ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ದೇವೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂನ್ ೧೨ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ದೇವೇಗೌಡರು ಅವಿರೋಧವಾಗಿ ಆಯ್ಕೆಯಾಗಿದ್ದರು. ಸಂಸತ್ತಿನ ಮೇಲ್ಮನೆಗೆ ನೂತನವಾಗಿ ಆಯ್ಕೆಯಾದ 61 ಸದಸ್ಯರಲ್ಲಿ 45 ಮಂದಿ ಜುಲೈ 22ರಂದು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದರೆ ಅನಾರೋಗ್ಯ ಮತ್ತು ಹಿರಿಯ ನಾಗರಿಕರ ಪ್ರಮಾಣಕ್ಕೆ ಕೋವಿಡ್-19 ನಿರ್ಬಂಧಗಳು ಇದ್ದ ಕಾರಣ ಗೌಡರು ದೆಹಲಿಗೆ ತೆರಳಲು ಸಾಧ್ಯವಾಗಿರಲಿಲ್ಲ.