Wednesday, August 10, 2022

Latest Posts

ಇಂದು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ, ಕಬ್ಜ ತಂಡದಿಂದ ಉಡುಗೊರೆ

ರಿಯಲ್  ಸ್ಟಾರ್ ಉಪೇಂದ್ರ ಅವರಿಗೆ  ಇಂದು  ೫೩ನೇ ಹುಟ್ಟುಹಬ್ಬದ  ಸಂಭ್ರಮ. ಕೊರೋನಾದಿಂದ  ಅವರು  ಸರಳವಾಗಿ  ಹುಟ್ಟುಹಬ್ಬವನ್ನು  ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶು ಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ.

ಅಂದಹಾಗೆ ಉಪೇಂದ್ರ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೊನಾ ವೈರಸ್ ಹಾವಳಿಯ ಪರಿಣಾಮ ಈ ಬಾರಿಯ ಅದ್ದೂರಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ನೆಚ್ಚಿನ ನಟನನ್ನು ನೋಡಲು, ಶು ಭಹಾರೈಸಲು ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಬಂದು ಜಮಾಯಿಸುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಅದ್ದೂರಿತನಕ್ಕೆ ಬ್ರೇಕ್ ಬಿದ್ದಿದೆ. ಈ ಬಾರಿ ಮನೆಯಲ್ಲಿ ಇರುವುದಿಲ್ಲ, ಯಾರು ಮನೆಯ ಬಳಿ ಬರಬೇಡಿ ಎಂದು ರಿಯಲ್ ಸ್ಟಾರ್ ಉಪೇಂದ್ರ ಈಗಾಗಲೇ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ’ಕಬ್ಜ’ ಸಿನಿಮಾದ ಥೀಮ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ..

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss