ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಕಡೆಗೂ ಮಹೂರ್ತ ಫಿಕ್ಸ್ ಆಗಿದೆ. ನಾಳೆ ಸಂಜೆ ನಾಲ್ಕು ಗಂಟೆಗೆ ಸಂಪುಟ ವಿಸ್ತರಣೆಯಾಗಲಿದೆ.
ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಸಂಜೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು, ನಾಳೆ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ. ಅನಗತ್ಯವಾಗಿ ಯಾರ್ಯಾರದ್ದೋ
ಹೆಸರನ್ನೋ ಸಚಿವರು ಎಂದು ಮಾತನಾಡುವುದು ಬೇಡ. ಸಂಜೆಯೇ ನಿಮಗೆ ಸಚಿವರ ಮಾಹಿತಿ ತಿಳಿಯಲಿದೆ ಎಂದಿದ್ದಾರೆ.